No menu items!
10.9 C
Munich
Sunday, September 27, 2026

ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Must read

ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಸದ್ಯ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಇನ್ನೂ ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ನಟ ದರ್ಶನ್ ಗೆ ಇಂದು ಕೂಡ ರಿಲೀಫ್ ಸಿಗದಂತೆ ಆಗಿದೆ. ಹೌದು ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಿದ್ದಾರೆ. ಆದ್ರೆ ಹೈಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಸ್ ವಿಶ್ವಚಿತ್ ಅವರನ್ನೊಳಗೊಂಡಂತ ನ್ಯಾಯಪೀಠವು ನಡೆಸಿತು. ಪ್ರಕರಣ ಸಂಬಂಧ ವರದಿಯನ್ನು ನೀಡಲು ನಿರ್ದೇಶಿಸಿದ್ದರಿಂದಾಗಿ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನಟ ದರ್ಶನ್ ಪ್ರಕರಣದ ವರದಿಯನ್ನು ಸಲ್ಲಿಸಿತು. ಈ ಬಳಿಕ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

- Advertisement -spot_img

More articles

- Advertisement -spot_img

Latest article