ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಿಕೆ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ನಟ ದರ್ಶನ್ ಜಾಮೀನು ಕೋರಿ 57ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ನಟ ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ.
ಈ ಮಧ್ಯೆ ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ನಟ ದರ್ಶನ್ ಪರ ವಕೀಲ ಸುನೀಲ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ವಕೀಲ ಸುನೀಲ್ ಮನವಿ ಮೇರೆಗೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 30ಕ್ಕೆ ಮೂಂದೂಡಿಕೆ ಮಾಡಿದೆ ಎಂದು ತಿಳಿದು ಬಂದಿದೆ.