ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

Date:

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆಯಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳ ವಿರುದ್ಧದ ದೋಷಾರೋಪ ನಿಗದಿ ನವೆಂಬರ್ 3 ರಂದು ನಡೆಯಲಿದೆ ಎಂದು ಬೆಂಗಳೂರು 57ನೇ ಸಿಸಿಎಚ್ ನ್ಯಾಯಾಲಯ ನಿರ್ಧರಿಸಿದೆ.

ಇಂದು ನಡೆದ ವಿಚಾರಣೆಯಲ್ಲಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ಹಾಜರಾಗಿದ್ದರು. ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಹಾಜರಾತಿ ದಾಖಲಾದ ನಂತರ, ನ್ಯಾಯಾಲಯವು ಪ್ರಾಥಮಿಕ ವಿಚಾರಣೆ ನಡೆಸಿತು.

ನ್ಯಾಯಾಧೀಶರು ವಿಚಾರಣೆಯ ವೇಳೆ ದೋಷಾರೋಪ ನಿಗದಿ ಪ್ರಕ್ರಿಯೆಯನ್ನು ನವೆಂಬರ್ 3ಕ್ಕೆ ಮುಂದೂಡಿಕೆ ಮಾಡಿ, ಅದೇ ದಿನ ವಿಡಿಯೋ ಕಾನ್ಫರೆನ್ಸ್ ಮೂಲಕವೇ ದೋಷಾರೋಪ ನಿಗದಿಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ನವೆಂಬರ್ 3ರಂದು ಕೋರ್ಟ್, ಆರೋಪಿಗಳ ವಿರುದ್ಧ ಯಾವ್ಯಾವ ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ಮುಂದುವರಿಯಬೇಕು ಎಂಬುದನ್ನು ಅಧಿಕೃತವಾಗಿ ಘೋಷಿಸಲಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...