ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನ ಆರೋಪಿಗಳಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಜೂನ್ 11ರಂದು ಈ ಬಂಧನ ನಡೆದಿದ್ದು, ಅಲ್ಲಿಂದ ಇಲ್ಲಿಯವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ದರ್ಶನ್ ಸೇರಿದಂತೆ ಆರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಹತ್ಯೆ ಪ್ರಕರಣದಲ್ಲಿ ಸ್ಥಳ ಮಹಜರು, ಸಾಕ್ಷ್ಯ ಸಂಗ್ರಹ ಪ್ರಕ್ರಿಯೆಗಳು ಈ ವಾರ ಮತ್ತು ಕಳೆದ ವಾರ ನಡೆದಿತ್ತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್, ವಿನಯ್, ಪ್ರದೂಶ್, ನಾಗರಾಜ್, ಲಕ್ಷ್ಮಣ್, ಧನರಾಜ್ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ ದರ್ಶನ್ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.
ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡಗೆ ಜೈಲು, ದರ್ಶನ್ ಪೊಲೀಸ್ ಕಸ್ಟಡಿಗೆ
Date: