ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಇನ್ನು ಇಂದು ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆದಿದೆ.
ಈ ಪೈಕಿ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಆಗಿದ್ದು, ನ.21 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪವಿತ್ರಾ ಗೌಡ ಅವರು ಜೈಲು ಸೇರಿದಾಗಿನಿಂದ ಅವರ ಫ್ಯಾಮಿಲಿ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದು, ಪವಿತ್ರಾ ಗೌಡ ಅವರ ತಾಯಿ, ಸಹೋದರ, ಮಗಳು ಅವರ ಜಾಮೀನಿಗಾಗಿ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಅವರಿಗೆ ಈವರೆಗೆ ಜಾಮೀನು ಮಂಜೂರಾಗಿಲ್ಲ.