ರೇಣುಕಾಸ್ವಾಮಿ ಕೊಲೆ ಕೇಸ್​: ಬೆಂಗಳೂರಿನಲ್ಲಿ ದರ್ಶನ್ ಆಪ್ತ ಪ್ರದೋಷ್ ಅರೆಸ್ಟ್!

Date:

ರೇಣುಕಾಸ್ವಾಮಿ ಕೊಲೆ ಕೇಸ್​: ಬೆಂಗಳೂರಿನಲ್ಲಿ ದರ್ಶನ್ ಆಪ್ತ ಪ್ರದೋಷ್ ಅರೆಸ್ಟ್!

 

ಬೆಂಗಳೂರು: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದ್ದು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿದೆ. ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ.

ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್  ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶದ ಬೆನ್ನಲ್ಲೇ  ಪ್ರದೂಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದರು. ಈ ಬಗ್ಗೆ ವಿಚಾರಣೆ ಮಾಡಿದ್ದ ಸುಪ್ರೀಂ, ಕರ್ನಾಟಕ ಹೈಕೋರ್ಟ್​ನ ತೀರ್ಪಿನಲ್ಲಿ ದೋಷವಿದೆ ಎಂದು ಹೇಳಿದೆ. ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟ್ ಸೇದಿದ್ದನ್ನ ತಿಳಿಸಲಾಗಿತ್ತು. ಇದಕ್ಕೆ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇನ್ನೊಮ್ಮೆ ಇದೇ ರೀತಿ ಆದರೆ ಗೃಹ ಇಲಾಖೆಯನ್ನು ಇಲ್ಲಿಗೆ ಕರೆಸಬೇಕಾಗುತ್ತದೆ ಎಂದು ಸುಪ್ರೀಂ ಹೇಳಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...