ಬೆಂಗಳೂರು: ನಟ ದರ್ಶನ್ ಅವರು ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇದರ ಬೆನ್ನಲ್ಲೇ ಡಿ ಟೀಮ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಮತ್ತೊಬ್ಬ ಸ್ಯಾಂಡಲ್ ವುಡ್ ನಟ ಅರೆಸ್ಟ್ ಆಗಿದ್ದಾನೆ.
ಹೌದು ಎ 14 ಆರೋಪಿ ಪ್ರದೋಶ್ ಸ್ಯಾಂಡಲ್ ವುಡ್ ನಟ ಬಂಧನವಾಗಿದ್ದು, ದರ್ಶನ್ ಜೊತೆಗಿನ ಬೃಂದಾವನ,ಬುಲ್ ಬುಲ್ ಚಿತ್ರಗಳಲ್ಲಿ ನಟಿಸಿದ್ದರು. ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪ್ರದೋಶ್ ದರ್ಶನ್ ಹಿಂದೆ ಮುಂದೆ ಓಡಾಡಿಕೊಂಡಿದ್ದರು. ಇಷ್ಟೇ ಅಲ್ಲದೆ ಐಟಿ ಬ್ಯಾಕ್ ಗ್ರೌಂಡ್ ಇರೋ ಈತ ಬಿಜೆಪಿಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇನ್ನೂ ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪ ಸಾಬೀತಾದರೆ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸ್ಯಾಂಡಲ್ ವುಡ್ ನಟ ಅರೆಸ್ಟ್
Date: