ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ಹೋಗಲು ಅನುಮತಿ ಕೋರಿ ದರ್ಶನ್ ಅರ್ಜಿ

tnit editors
1 Min Read

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ಹೋಗಲು ಅನುಮತಿ ಕೋರಿ ದರ್ಶನ್ ಅರ್ಜಿ

ಬೆಂಗಳೂರು: ಸಿನಿಮಾ ಶೂಟಿಂಗ್ ಗಾಗಿ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದು, ಮೊದಲು ದೇಶದೊಳಗೆ ಪ್ರಯಾಣಿಸಲು ಅನುಮತಿ ಪಡೆದಿದ್ದ ಅವರು, ಈಗ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿದ್ದಾರೆ. ಜೂನ್ 1ರಿಂದ 25ರವರೆಗೆ ದುಬೈ ಮತ್ತು ಯುರೋಪ್ಗೆ ಪ್ರಯಾಣಿಸಲು 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎನ್ನುವ ಸೂಚನೆಯನ್ನು ನ್ಯಾಯಾಲಯವು ನೀಡಿತ್ತು. ಆದರೆ, ಹೈಕೋರ್ಟ್ನಿಂದ ದೇಶ ಸುತ್ತಾಟ ಮಾಡಲು ದರ್ಶನ್ ಅನುಮತಿ ಪಡೆದರು. ರಾಜಸ್ಥಾನ ಮೊದಲಾದ ಕಡೆಗಳಲ್ಲಿ ‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ದರ್ಶನ್ ಮರಳಿದ್ದರು. ಈಗ ವಿದೇಶಕ್ಕೆ ಹಾರಲು ಆರೋಪಿ ದರ್ಶನ್ ಸಿದ್ಧತೆ ಮಾಡಿಕೊಂಡಿದ್ದಾರೆ.
ದರ್ಶನ್ ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಹಾಡಿನ ಶೂಟ್ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಸಿನಿಮಾ ಶೂಟಿಂಗ್ಗಾಗಿ ದುಬೈ ಮತ್ತು ಯೂರೋಪ್ಗೆ ತೆರಳಲು ಅವಕಾಶ ಕೋರಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅವಕಾಶ ಕೋರಲಾಗಿದೆ.

Share This Article