ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಹಾಗೂ ಇತರೆ ಐವರ ಜೈಲು ಸ್ಥಳಾಂತರ ಅರ್ಜಿಗೆ ಸಂಬಂಧಿಸಿದಂತೆ ಇಂದು ಮಹತ್ವದ ತೀರ್ಪು ಹೊರಬೀಳಲಿದೆ.
ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್ ಮತ್ತು ಪ್ರದೋಶ್ ಅವರನ್ನು ಸ್ಥಳಾಂತರಿಸಲು ಜೈಲಾಧಿಕಾರಿಗಳು ಎಸ್ಪಿಪಿ ಮುಖಾಂತರ ಅರ್ಜಿ ಸಲ್ಲಿಸಿದ್ದರು. ಆರೋಪಿಗಳು ಇದಕ್ಕೆ ಆಕ್ಷೇಪಣೆ ಸಲ್ಲಿಸಿ, ಬೆಂಗಳೂರಿನಲ್ಲೇ ಉಳಿಯಲು ಬಯಸಿದ್ದರು.
ಇಂದು ವಿಚಾರಣೆ ನಡೆಸಲಿರುವ ಕೋರ್ಟ್, ಈ ಕುರಿತು ಅಂತಿಮ ಆದೇಶ ನೀಡಲಿದೆ.