ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆ ಮತ್ತಷ್ಟು ತೀವ್ರಗೊಳ್ಳಲಿದೆ. ಅದಲ್ಲದೆ ಇನ್ವೇಸ್ಟಿಗೇಷನ್ ಟೀಂ ಗೆ ಮತ್ತೆ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಯಾಗಿದ್ದಾರೆ. ಆರೋಪಿ ದರ್ಶನ್ ರನ್ನು ಎಸಿಪಿ ಚಂದನ್ ಮತ್ತು ಗಿರೀಶ್ ನಾಯ್ಕ್ ಮೈಸೂರಿನಿಂದ ಕರೆತಂದಿದ್ದರು. ಗಿರೀಶ್ ನಾಯ್ಕ್ ಮೊದಲು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಕಾಧಿಕಾರಿಯಾಗಿದ್ದರು.
ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇದೇ ವೇಳೆ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಇನ್ವೇಸ್ಟಿಗೇಷನ್ ಟೀಂ ಗೆ ಮತ್ತೆ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆ
Date: