ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆಗಿರುವ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈ ಕೇಸ್ನ ತನಿಖೆ ಕೊನೇ ಹಂತಕ್ಕೆ ಬಂದಿದೆ. ಬೆಂಗಳೂರು ಪೊಲೀಸರು ಇಂದು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 4,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವುದಾಗಿ ತಿಳಿದುಬಂದಿದೆ.
ಎಸಿಪಿ ಚಂದನ್ ಕುಮಾರ್ 4 ಸಾವಿರಕ್ಕೂ ಹೆಚ್ಚು ಪುಟಗಳಿರುವ ಚಾರ್ಜ್ ಶೀಟ್ ಕೋರ್ಟಿಗೆ ಸಲ್ಲಿಕೆ ಮಾಡಿದ್ದು, ಚಾರ್ಜ್ ಶೀಟಿನಲ್ಲಿ ಪವಿತ್ರಾಗೌಡ ಪ್ರಕರಣದ ಮೊದಲನೇ ಆರೋಪಿ ನಟ ದರ್ಶನ್ ಪ್ರಕರಣದ ಎರಡನೇ ಆರೋಪಿ ಎಂದು ಉಲ್ಲೇಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದೋಷಾರೋಪಣೆ ಪಟ್ಟಿ ಸಲ್ಲಿಕೆಗೆ ಸಂಪೂರ್ಣ ತಯಾರಿ ನಡೆಸಿದ್ದ ಪೊಲೀಸರು ಇದೀಗ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 4,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವುದಾಗಿ ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು
Date: