ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

tnit editors
1 Min Read

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತುಮಕೂರು ಜಿಲ್ಲಾ ಕಾರಾಗೃಹದಲ್ಲಿರುವ ಮೂವರು ಆರೋಪಿಗಳು ರಿಲೀಸ್ ಆಗಿದ್ದಾರೆ. ಆರೋಪಿ ಕೇಶವಮೂರ್ತಿ, ಕಾರ್ತಿಕ್, ನಿಖಿಲ್ ನಾಯಕ್ ಜೈಲಿನಿಂದ ರಿಲೀಸ್ ಆಗಿದ್ದು, ಜಾಮೀನು ಸಿಕ್ಕಿ 10 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಕಳೆದ ತಿಂಗಳ ಸೆಪ್ಟೆಂಬರ್ 23 ರಂದು ಜಾಮೀನು ಸಿಕ್ಕಿತ್ತು.ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ನಿಂದ, ಆರೋಪಿ ನಿಖಿಲ್ ನಾಯಕ್ ಹಾಗೂ ಕಾರ್ತಿಕ್ ಗೆ 57 ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿತ್ತು. ಜಾಮೀನಿಗೆ ಶ್ಯೂರಿಟಿದಾರರು ಸಿಗದೇ ಆರೋಪಿಗಳ ಕುಟುಂಬಸ್ಥರು ಪರದಾಡಿದ್ದರು.
ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮಂಗಳವಾರ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ತಲುಪಿದ್ದು, ಇಂದು ಎ-16 ಆರೋಪಿ ಕೇಶವಮೂರ್ತಿ, ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Share This Article