ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಜಾಮೀನು ಭವಿಷ್ಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಅವರು ಜಾಮೀನಿಗಾಗಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆಯಲಿದೆ. ದರ್ಶನ್ ಹಾಗೂ ಜೈಲಿನಲ್ಲೇ ಇರುವ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಜಡ್ಜ್ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ.
ನಟ ದರ್ಶನ್ , ನಟಿ ಪವಿತ್ರಾಗೌಡ , ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಹಾಗೂ ಜಗದೀಶ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಈಗಾಗಲೇ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದಾರೆ.
ಉಳಿದ ಆರೋಪಿಗಳ ಪರವಾಗಿ ಅವರ ವಕೀಲರು ಇಂದು ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ. ಪವಿತ್ರಾಗೌಡ ಪರವಾಗಿ ಹಿರಿಯ
ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಲಿದ್ದಾರೆ. ಆ ಬಳಿಕ ಪ್ರಕರಣದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಪ್ರಸನ್ನ ಕುಮಾರ್ ವಾದ ಮಾಡಲಾಗಿದ್ದಾರೆ.
ಆರು ಆರೋಪಿಗಳ ಜಾಮೀನಿಗೆ ಆಕ್ಷೇಪಿಸಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದ ಮಾಡಲಿದ್ದಾರೆ. ಮಧ್ಯಾಹ್ನದ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.