ರೇಣುಕಾಸ್ವಾಮಿ ಪ್ರಕರಣ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ

tnit editors
1 Min Read

ರೇಣುಕಾಸ್ವಾಮಿ ಪ್ರಕರಣ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಕೇಸ್‌ನಲ್ಲಿ 6 ವಾರಗಳ ಮಧ್ಯಂತರ ಜಾಮೀನು ಪಡೆದಿದ್ದಾರೆ. ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಲಿದೆ. ಈ ವೇಳೆ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ಮಧ್ಯಂತರ ಜಾಮೀನು ಅವಧಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ. ದರ್ಶನ್ ಜಾಮೀನು ಅರ್ಜಿ ವಿರೋಧಿಸಿ SPP ಪ್ರಸನ್ನ ಕುಮಾರ್ ವಾದ ಮಂಡಿಸಲಿದ್ದಾರೆ.
ಶುಕ್ರವಾರ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಏಕಸದಸ್ಯ ಪೀಠ, ಸರ್ಕಾರ ಪರ ವಕೀಲರಾದ ಪ್ರಸನ್ನಕುಮಾರ ವಾದ ಆಲಿಸಿ ಇಂದಿಗೆ ಮುಂದೂಡಿತ್ತು. ದರ್ಶನ್ ಸೇರಿದಂತೆ ಇತರೆ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿತ್ತು. ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಮಾಡಿದ್ದ ವಾದಕ್ಕೆ ಪ್ರಸನ್ನ ಕುಮಾರ್ ಪ್ರತಿವಾದಿಸಿದ್ರು. ಇಂದು ಮಧ್ಯಾಹ್ನ 2.30ಕ್ಕೆ ಬೇಲ್ ಅರ್ಜಿ ವಿಚಾರಣೆ ನಡೆಸಲಿದೆ.

Share This Article