ಬೆಂಗಳೂರು: ದರ್ಶನ್ ಹಾಗೂ ಸಹಚರರಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿಲಾಗಿದೆ. ನಾವು ಯಾರನ್ನೂ ರಕ್ಷಿಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿಲಾಗಿದೆ. ಚಾರ್ಜ್ ಶೀಟ್ ಸಲ್ಲಿಕೆಯಾಗ್ತಿದೆ ಅಗತ್ಯ ಆದ್ದರಿಂದ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ನಾವು ಯಾರನ್ನೂ ರಕ್ಷಿಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಹೇಳಿದರು.
ಇನ್ನೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮಾಡಿಸುವ ಅಗತ್ಯವಿಲ್ಲ, ಮುಡಾ ಆರೋಪದ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಇಲಾಖಾ ತನಿಖೆ ನಡೆಯುತ್ತಿದೆ, ಆದ್ದರಿಂದ ಎಸ್‌ಐಟಿ ತನಿಖೆ ಅಗತ್ಯವಿಲ್ಲ ಎಂದು ಹೇಳಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾವು ಯಾರನ್ನೂ ರಕ್ಷಿಸುವುದಿಲ್ಲ – ಡಾ.ಜಿ.ಪರಮೇಶ್ವರ್
Date: