ಬೆಂಗಳೂರು:ರೇಣುಕಾ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗುತ್ತದೆ. ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.ತನಿಖಾ ತಂಡ ಕೆಲ ವಿಧಿವಿಜ್ಞಾನ ಮತ್ತು ತಾಂತ್ರಿಕ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಹೆಡ್ ಆಫ್ ದಿ ಚಾರ್ಜ್‌ಶೀಟ್ ಹೇಗಿರಬೇಕು? ಪ್ರಕರಣದಲ್ಲಿನ ಸಾಕ್ಷಿಗಳ ಹೇಳಿಕೆ ಎಲ್ಲಿ ಹಾಕಬೇಕು? ಡಿಜಿಟಲ್ ಸಾಕ್ಷ್ಯಗಳನ್ನು ಹೇಗೆ ನಮೂದಿಸಬೇಕು? ಹೀಗೆ ಎಲ್ಲಾ ಅಂಶಗಳಲ್ಲೂ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಖುದ್ದು ಚಾರ್ಜ್‌ಶೀಟ್ ಡ್ರಾಫ್ಟ್ ಕಾಪಿ ಮೇಲೆ ನಿಗಾ ಇಟ್ಟಿದ್ದಾರೆ. ಬಹುತೇಕ ಪ್ರಕರಣದಲ್ಲಿ ಚಾರ್ಜ್‌ಶೀಟ್‌ನಲ್ಲಿರುವ ಲೋಪ ವಿಚಾರವನ್ನು ವಕೀಲರು ಪ್ರಸ್ತಾಪ ಮಾಡಿ ಆರೋಪಿಗಳನ್ನು ಪಾರು ಮಾಡುತ್ತಾರೆ. ಈ ಕಾರಣಕ್ಕೆ ಕಾನೂನು ತಜ್ಞರಿಂದ ಸಲಹೆ ಪಡೆದು ಆರೋಪ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.