ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿಕೆ

Date:

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧದ ದೋಷಾರೋಪಣೆ ನಿಗದಿ ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ. ನಗರದ 57ನೇ ಸಿಸಿಎಚ್ ನ್ಯಾಯಾಲಯ ಇಂದು ಈ ಬಗ್ಗೆ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳು ಗೈರಾಗಿದ್ದರಿಂದ ವಿಚಾರಣೆ ಮುಂದೂಡಬೇಕಾಯಿತು.

ಪವಿತ್ರಾ ಗೌಡ, ದರ್ಶನ್ ತೂಗುದೀಪ ಸೇರಿದಂತೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪವಿತ್ರಾ ಗೌಡ ಪರ ವಕೀಲರು ದೋಷಾರೋಪಣೆ ನಿಗದಿಗೆ ಮನವಿ ಸಲ್ಲಿಸಿದರೂ, ಕಾರ್ತಿಕ್ ಮತ್ತು ಕೇಶವಮೂರ್ತಿ ಗೈರಾಗಿದ್ದ ಕಾರಣ ಕೋರ್ಟ್ ವಿಚಾರಣೆಯನ್ನು ಮುಂದೂಡಿತು.

ನಟ ದರ್ಶನ್ ಪರ ವಕೀಲರು, ಜೈಲಿನಲ್ಲಿ ಕನಿಷ್ಠ ಸೌಲಭ್ಯ ಒದಗಿಸಲಾಗುತ್ತಿಲ್ಲವೆಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೈಲಾಧಿಕಾರಿಗಳು, ಜೈಲು ಮ್ಯಾನ್ಯುಯಲ್ ಪ್ರಕಾರವೇ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ನ್ಯಾಯಾಧೀಶರಿಗೆ ತಿಳಿಸಿದ್ದಾರೆ.

 ಈ ಪ್ರಕರಣದಲ್ಲಿ ಪವಿತ್ರಾ ಗೌಡ ಮತ್ತು ದರ್ಶನ್ ಸೇರಿದಂತೆ ಏಳು ಮಂದಿಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಆಗಸ್ಟ್ 14ರಂದು ರದ್ದುಪಡಿಸಿತ್ತು. ಪ್ರಸ್ತುತ ಎಲ್ಲರೂ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...