ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ..!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಇತ್ತೀಚೆಗಷ್ಟೆ ದರ್ಶನ್ರ ತಾಯಿ ಮೀನಮ್ಮನವರು ಬಳ್ಳಾರಿ ಜೈಲಿಗೆ ಆಗಮಿಸಿ ದರ್ಶನ್ ಅನ್ನು ಕಂಡು ಹೋದರು. ಇನ್ನೂ ಇಂದು ಆರೋಪಿ ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನಿಗೆ ಅರ್ಜಿ ಹಾಕಿರೋ ಆರೋಪಿ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದೆ. ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇನ್ನು ಆರೋಪಿ ದರ್ಶನ್ ಜೈಲಿನಲ್ಲಿ ಟೆನ್ಷನ್‌ಗೆ ಒಳಗಾಗಿದ್ದಾರೆ. ಜಾಮೀನು ಅರ್ಜಿ ವಿಚಾರವಾಗಿ ಜೈಲು ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ವಕೀಲರು ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ.