ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ನಟ ದರ್ಶನ್‌ ಜಾಮೀನು ಭವಿಷ್ಯ

Date:

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ನಟ ದರ್ಶನ್‌ ಜಾಮೀನು ಭವಿಷ್ಯ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಎರಡನೇ ಆರೋಪಿ ಆಗಿದ್ದಾರೆ. ಕಳೆದ ನಾಲ್ಕು ತಿಂಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ. ಇನ್ನೂ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ಇಂದು ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.
ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...