ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ನಟ ದರ್ಶನ್ ಸದ್ಯ ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಡಿಕಲ್ ಬೇಲ್ ಕಾಲಾವಧಿ ಕೂಡ ಮುಗಿಯುತ್ತಾ ಬಂದಿದೆ. ಇನ್ನೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಸಂಬಂಧ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನು ಕೆಲವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಇಂದು ನಡೆದ ಅರ್ಜಿ ವಿಚಾರಣೆಯಲ್ಲಿ ತನಿಖಾಧಿಕಾರಿಗಳ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಡಿಸೆಂಬರ್ 09 (ಸೋಮವಾರ) ಮಧ್ಯಾಹ್ನ 2:30ಕ್ಕೆ ಮುಂದೂಡಿದ್ದಾರೆ.
ಪವಿತ್ರಾ ಗೌಡ, ದರ್ಶನ್ ಇನ್ನಿತರೆ ಆರೋಪಿಗಳ ಪರ ವಕೀಲರು ತಮ್ಮ ವಾದಗಳಲ್ಲಿ ಮಂಡಿಸಿದ್ದ ವಿಚಾರಗಳಿಗೆ, ಎತ್ತಿದ್ದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ದರ್ಶನ್ ಪರ ವಕೀಲರು ತುಸು ಕಠಿಣವಾದ ಪದಗಳನ್ನು ಬಳಸಿಯೇ ವಾದ ಮಂಡಿಸಿದರು. ವಿಶೇಷವಾಗಿ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರ ವಾದವನ್ನು ನ್ಯಾಯಾಲಯದಲ್ಲಿ ಟೀಕೆ ಮಾಡಿದರಲ್ಲದೆ, ನ್ಯಾಯಾಲಯದ ಹಾದಿ ತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ಸಹ ವಾದಿಸಿದರು.
ದರ್ಶನ್ ಅನಾರೋಗ್ಯದ ವಿಷಯವಾಗಿ ಅವರ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ಪ್ರಸನ್ನ ಕುಮಾರ್, ದರ್ಶನ್ ಪರ ವಕೀಲರು, ನ್ಯಾಯಾಲಯಕ್ಕೆ ಸುಳ್ಳು ಹೇಳಿದ್ದಾರೆ, ನ್ಯಾಯಾಲಯದ ದಾರಿ ತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ವಾದ ಮಂಡಿಸಿದರು. ಅಂತಿಮವಾಗಿ ನ್ಯಾಯಮೂರ್ತಿಗಳು ಪ್ರಕರಣದ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.