ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ.
ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಸ್ಥಿತರಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ. ಅಧಿಕಾರಿಗಳ ಬದಲಿಗೆ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರೇ ಉತ್ತರ ನೀಡಿದ್ದಾರೆ.
ಪರಮೇಶ್ವರ ಮಾಹಿತಿ ಕೇಳಿದ ಸಂದರ್ಭದಲ್ಲಿ ರೇವಣ್ಣನವರೇ ಉತ್ತರ ನೀಡುತ್ತಿದ್ದ ಕಾರಣ, ನಾನು ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡುತ್ತಿದ್ದೇನೆ. ಅವರಿಗೆ ಮಾತನಾಡಲು ಬಿಡಿ ಎಂದು ಪರಮೇಶ್ವರ್ ಹೇಳಿದ್ದಾರೆ.
ನೀವು ಇಲಾಖೆಯ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡಿತ್ತೀದ್ದೀರಿ. ಆದರೆ, ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಲಿ. ಎಲ್ಲದಕ್ಕೂ ನೀವೇ ಮಾತನಾಡಿದರೆ ಹೇಗೆ ಎಂದು ಪರಮೇಶ್ವರ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ಇಲಾಖೆಯ ಅಧಿಕಾರಿಗಳೊಂದಿಗಿನ ಸಭೆಯ ಮುಕ್ತಾಯದ ಸಂದರ್ಭದಲ್ಲಿ ಸಿಎಂ ತೆರಳಿದ್ದು, ಬಳಿಕ ರೇವಣ್ಣ ಕೂಡ ಸಭೆಯಿಂದ ಹೊರ ನಡೆದಿದ್ದಾರೆ. ನಂತರ ಪರಮೇಶ್ವರ್ ಕೆಲಕಾಲ ಸಭೆಯನ್ನು ಮುಂದುವರೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ, ಸೂಚನೆ ನೀಡಿದ್ದಾರೆ ಎನ್ನಲಾಗಿದೆ.