ರೇವಣ್ಣ ಎಸ್ ಐ ಟಿ ಕಸ್ಟಡಿ ಅಂತ್ಯ: ಇಂದು ನಿರ್ಧಾರವಾಗಲಿದೆ ರೇವಣ್ಣ ಭವಿಷ್ಯ

0
26

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಆರೋಪಿಗೆ ನ್ಯಾಯಾಲಯದಲ್ಲಿ ಅವರಿಗೆ ಜಾಮೀನು ಸಿಗುತ್ತದೆಯೇ ಅಥವಾ ಜೈಲಿಗೆ ಹೋಗ್ತಾರೆಯೇ ಎಂಬುದು ನಿರ್ಧಾರವಾಗಲಿದೆ.
ದೌರ್ಜನ್ಯ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್‌ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆರೋಪಿ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅಂತ್ಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ಜಾಮೀನು ತೀರ್ಪು ಆರೋಪಿ ಪರ ಬಂದರೆ ರೇವಣ್ಣ ಮನೆಗೆ ಹೋಗುತ್ತಾರೆ. ಜಾಮೀನು ಸಿಗದೇ ಹೋದರೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಲಿದ್ದಾರೆ. ಬಹುತೇಕ ಕಿಡ್ನ್ಯಾಪ್ ಕೇಸ್‌ನಲ್ಲಿ ವಿಚಾರಣೆ ಮುಗಿದಿರೋ ಹಿನ್ನೆಲೆ ಕಸ್ಟಡಿಗೆ ಕೇಳುವ ಸಾಧ್ಯತೆ ಕಡಿಮೆ ಎನ್ನುತ್ತಿದೆ ಎಸ್‌ಐಟಿ ಮೂಲಗಳು.