ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ: ಸಿಎಮ ಸಿದ್ದರಾಮಯ್ಯ

Date:

ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ: ಸಿಎಮ ಸಿದ್ದರಾಮಯ್ಯ

ಬೆಮಗಳೂರು: ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಕೆವಿಕೆ ಸಭಾಂಗಣದಲ್ಲಿ “ವಿಜಯ ಕರ್ನಾಟಕ” ಪತ್ರಿಕೆ ಆಯೋಜಿಸಿದ್ದ “ಸೂಪರ್ ಸ್ಟಾರ್ ರೈತ” ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕ ರೈತರನ್ನು ಪುರಸ್ಕರಿಸಿ ಮಾತನಾಡಿದರು.
ಸಾಮಾಜಿಕ ನ್ಯಾಯ, ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ ಜನತೆಗೆ ಮನವರಿಕೆಯಾಗಿದೆ ಎಂದರು.
ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿಗೆ 26000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ ಎಂದು ರೈತ ಸಮಾಜವನ್ನು ಪ್ರಶ್ನಿಸಿದರು.
ಇಂಥಾ ಹೊತ್ತಲ್ಲಿ ರೈತ ಸಾಧಕರನ್ನು ಗುರುತಿಸಿ ಕರೆದು ಸನ್ಮಾನಿಸುತ್ತಿರುವುದು ಅತ್ಯಂತ ಪ್ರೋತ್ಸಾಹದಾಯಕ. ಸಮಗ್ರ ಕೃಷಿಯನ್ನು ಮಾಡದ ಹೊರತು ಕೃಷಿ ಲಾಭದಾಯಕವಲ್ಲ. ಜನಸಂಖ್ಯೆ ಬೆಳೆಯುತ್ತಿದೆ. ನಮ್ಮ ರಾಜ್ಯದಲ್ಲಿ ರಾಜಸ್ತಾನದ ನಂತರ ಅತಿ ಹೆಚ್ಚು ಒಣ ಕೃಷಿ ಭೂಮಿ ಹೆಚ್ಚು ಹೊಂದಿದೆ ಎಂದರು.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...