ರೋಗಿಗಳೊಂದಿಗೆ ಸಹನೆಯಿಂದ ವರ್ತಿಸಿ ! ಸರ್ಕಾರಿ ವೈದ್ಯರಿಗೆ ಯಡಿಯೂರಪ್ಪ ಎಚ್ಚರಿಕೆ ?

admin
1 Min Read

ವಿಕ್ಟೋರಿಯಾ ಆಸ್ಪತ್ರೆಯ  ನೂತನ ಕಟ್ಟಡದ ಶಂಕುಸ್ಥಾಪನೆಗೆ ಆಗಮಿಸಿದ  ಸಿಎಂ ಯಡಿಯೂರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ವೈದ್ಯರಿಗೆ ಕೆಲವೊಂದು ಸಲಹೆಗಳನ್ನು ನೀಡಿದರು ರೋಗಿಗಳೊಂದಿಗೆ ಸಹನೆ ಸಂಯಮದಿಂದ ನಡೆದುಕೊಳ್ಳುವಂತೆ ಕರೆ ನೀಡಿದರು.

ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಕೆಲಸ ಮಾಡುತ್ತಿವೆ. ಅದರಲ್ಲಿ ವಿಕ್ಟೋರಿಯಾ ಆಸ್ಪತ್ರೆಯೂ ಒಂದು, ದಯವಿಟ್ಟು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು ಇಲ್ಲಿಗೆ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಿರುಕುಳ ನೀಡದೆ ಚಿಕಿತ್ಸೆ ನೀಡಿ ಎಂದು ಸರ್ಕಾರಿ ವೈದ್ಯರಲ್ಲಿ ಸಿಎಂ ಯಡಿಯೂರಪ್ಪ ಮನವಿ ಜೊತೆ ಎಚ್ಚರಿಕೆಯನ್ನು ನೀಡಿದರು. ಕೆಲವೊಂದು ಕಡೆ ಸರ್ಕಾರಿ ಆಸ್ಪತ್ರೆಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂಬ ಪ್ರಕರಣವನ್ನು ಗಮನಿಸಿದ ಯಡಿಯೂರಪ್ಪ ಅವರು ಈ ರೀತಿಯಾಗಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ .

Share This Article
Leave a Comment