ರೋಷನ್ ಜೊತೆ ಅದ್ಧೂರಿಯಾಗಿ ಹಸೆಮಣೆಯೇರಿದ ಆ್ಯಂಕರ್ ಅನುಶ್ರೀ
ಕನ್ನಡದ ನಿರೂಪಕಿ ಅನುಶ್ರೀ ಅವರು ಅದ್ಧೂರಿಯಾಗಿ ದಾಂಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಕೊಡಗು ಮೂಲದ ರೋಷನ್ ಜೊತೆ ಸಪ್ತಪದಿ ತುಳಿದಿದ್ದಾರೆ.ರಾಜ್ ಬಿ ಶೆಟ್ಟಿ, ನೆನಪಿರಲಿ ಪ್ರೇಮ್, ಕಾವ್ಯ ಶಾ, ಸೋನಲ್ ಮೊಂಥೆರೋ, ನಟ ನಾಗಭೂಷಣ್, ಚೈತ್ರಾ ಜೆ ಆಚಾರ್, ನಟ ಶರಣ್ ಸೇರಿದಂತೆ ಸಾಕಷ್ಟು ಸ್ಟಾರ್ ಸೆಲೆಬ್ರಿಟಿಗಳು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ಈವರೆಗೆ ಅನುಶ್ರೀ ಅವರು ತಮ್ಮ ಮದುವೆ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅನುಶ್ರೀ ಹಾಗೂ ರೋಷನ್ ಅವರದ್ದು ಲವ್ ಮ್ಯಾರೇಜ್. ಪುನೀತ್ ರಾಜ್ಕುಮಾರ್ ಅವರ ಗಂಧದ ಗುಡಿ ರಿಲೀಸ್ ಟೈಂನಲ್ಲಿ ಇವರಿಬ್ಬರು ಭೇಟಿಯಾಗಿದ್ದರು.
ಅನುಶ್ರೀ ಹಾಗೂ ರೋಷನ್ ಮದ್ವೆಗೆ ಹಂಸಲೇಖ ಬಂದಿದ್ದಾರೆ. ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಕೂಡ ಆಗಮಿಸಿದ್ದಾರೆ. ಇವರ ಈ ಒಂದು ಮದವೆ ಸಂಭ್ರಮದಲ್ಲಿ ಸಿನಿಮಾರಂಗದ ಇನ್ನೂ ಹಲವರು ಬಂದು ನವ ಜೋಡಿಗೆ ಶುಭ ಹಾರೈಸಿದ್ದಾರೆ.