ರೋಹಿಣಿ ವರ್ಗಾವಣೆ ಬಗ್ಗೆ ನಟಿ ರಮ್ಯಾ ಗರಂ!

1
44

ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದು ಗುರುತಿಸಿಕೊಂಡಿದ್ದ ಐಎಎಸ್ ಆಫೀಸರ್ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನಿಂದ ವರ್ಗಾವಣೆ ಮಾಡಿರುವುದಕ್ಕೆ ನಟಿ-ರಾಜಕಾರಣಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ”ಪ್ರಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುವುದಿಲ್ಲ” ಎಂದಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ವರ್ಗಾವಣೆಯಲ್ಲಿ ಅಂತ್ಯ ಕಂಡಿದೆ. ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿದ್ರೆ, ಶಿಲ್ಪಾ ನಾಗ್‌ರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕರಾಗಿ ಅಧಿಕಾರ ನೀಡಲಾಗಿದೆ. ಮುಂದೆ ಓದಿ…

 

ಮೈಸೂರು ಮಾಜಿ ಡಿಸಿ ರೋಹಿಣಿ ಸಿಂಧೂರಿ ಕೆಲಸದ ಬಗ್ಗೆ ಮಂಡ್ಯ ಮಾಜಿ ಸಂಸದೆ ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ರಮ್ಯಾ ”ಸಿಂಧೂರಿ ಕಾರ್ಯ ವೈಖರಿಯನ್ನು ನಾನು ಅಂದು ಮೆಚ್ಚಿದ್ದೇನೆ, ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು, ಪ್ರಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಹಾಗೂ ಬೆಂಬಲಿಸುತ್ತಿಲ್ಲ” ಎಂದು ನಿರಾಸೆ ವ್ಯಕ್ತಪಡಿಸಿದರು.

 

ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಅವರ ಕುರಿತು ಸಿನಿಮಾ ಮಾಡುವ ಬಗ್ಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಚರ್ಚೆಗಳು ನಡೆಯುತ್ತಿದೆ. ನಾಲ್ವಡಿ ಕೃಷ್ಣರಾಜ್ ಒಡೆಯರ್ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಿಸಲು ಚಿಂತನೆ ನಡೆಸಿದ್ದು, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ನಟಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ರಾಜಕೀಯಕ್ಕೆ ಎಂಟ್ರಿ ಆದ್ಮೇಲೆ ನಟಿ ರಮ್ಯಾ ಯಾವುದೇ ಸಿನಿಮಾ ಮಾಡಿಲ್ಲ. ಇತ್ತೀಚಿನ ದಿನಗಳಲ್ಲಿ ರಾಜಕೀಯದಿಂದಲೂ ಮೋಹಕತಾರೆ ಅಂತರ ಕಾಯ್ದುಕೊಂಡಿದ್ದಾರೆ. ಹಾಗಾಗಿ, ರಮ್ಯಾ ಮತ್ತೆ ಚಿತ್ರರಂಗಕ್ಕೆ ಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ. ಆದರೆ, ಸಿನಿಮಾ ಮುಗಿದ ಅಧ್ಯಾಯ ಎಂದು ರಮ್ಯಾ ಅದಾಗಲೇ ಹೇಳಿಬಿಟ್ಟಿದ್ದಾರೆ.

 

1 COMMENT

LEAVE A REPLY

Please enter your comment!
Please enter your name here