ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲೇ ಬ್ಯಾಂಕ್ ಡೆಪ್ಯೂಟಿ ಮ್ಯಾನೆಜರ್ ರಿಂದ ವಂಚನೆ

Date:

ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲೇ ಬ್ಯಾಂಕ್ ಡೆಪ್ಯೂಟಿ ಮ್ಯಾನೆಜರ್ ರಿಂದ ವಂಚನೆ

ಲಕ್ಕಿ ಭಾಸ್ಕರ್ ಸಿನಿಮಾ ಮಾದರಿಯಲ್ಲೇ ಬ್ಯಾಂಕ್ ಡೆಪ್ಯೂಟಿ ಮ್ಯಾನೆಜರ್ ರಿಂದ ವಂಚನೆ ಆರೋಪ ಕೇಳಿಬಂದಿದೆ. ಗಿರಿನಗರ ಇಂಡಸ್ ಇಂಡ್ ಬ್ಯಾಂಕ್ ಮ್ಯಾನೆಜರ್ ಮೇಘನಾ ಳಿಂದ ಬ್ಯಾಂಕ್ ಗೆ ಬಂದ ವೃದ್ಧೆ ಗ್ರಾಹಕಿಗೆ 50 ಲಕ್ಷ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ ಪತಿ ಶಿವಪ್ರಸಾದ್, ಸ್ನೇಹಿತರಾದ ವರದರಾಜು ಮತ್ತು ಅನ್ವರ್ ಘೋಷ್ ಬಂಧಿತ ಆರೋಪಿಗಳು.
ಗಿರಿನಗರದಲ್ಲಿರುವ ಇಂಡಸ್ ಇಂಡ್ ಬ್ಯಾಂಕ್ನ ಉಪ ವ್ಯವಸ್ಥಾಪಕಿ ಮ್ಯಾನೆಜರ್ ಮೇಘನಾ ಎಫ್ಡಿ ಅಕೌಂಟ್ ಮಾಡಿಕೊಡುವುದಾಗಿ ವೃದ್ಧೆಗೆ ಸುಳ್ಳು ಹೇಳಿ ಆರ್ಟಿಜಿಎಸ್ ಕಾಗದಕ್ಕೆ ಸಹಿ ಮಾಡಿಸಿಕೊಂಡಿದ್ದಾಳೆ. ಬಳಿಕ ತಮ್ಮ ಹೊಸ ಬ್ಯಾಂಕ್ ಖಾತೆ ತೆಗೆದು ಆರ್ಟಿಜಿಎಸ್ ಮುಖಾಂತರ 50 ಲಕ್ಷ ರೂಪಾಯಿ ವರ್ಗಾಯಿಸಿಕೊಂಡಿದ್ದಾಳೆ.
ವೃದ್ಧೆ, ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...