ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ, ಪುಣೆ ಈ ಭಾಗಗಳಲ್ಲಿ ಲಕ್ಷ್ಮಣ ಸವದಿ ಹವಾ ಜೋರಿದೆ. ಈ ಭಾಗದಲ್ಲಿ ಬಿಜೆಪಿ ಗೆ ದೊಡ್ಡ ಶಕ್ತಿ ಇಲ್ಲ. ಲಕ್ಷ್ಮಣ ಸವದಿ ಇದ್ದರೆ ಕೆಲ ಭಾಗಗಳಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ. ಇದನ್ನು ಬಿಜೆಪಿ ಹೈಕಮಾಂಡ್‍ಗೆ ಮಹಾರಾಷ್ಟ್ರ ಬಿಜೆಪಿ ಸಂಘಟನೆ ಮನವರಿಕೆ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಸವದಿ ಹೆಸರು ಸೂಚಿಸಿದ್ದು ಕರ್ನಾಟಕದ ಬಿಜೆಪಿ ನಾಯಕರೇ ಶಾಕ್ ಆಗುವಂತೆ ಮಾಡಿತ್ತು.
ಲಕ್ಷ್ಮಣ ಸವದಿಯನ್ನು ಸಂಪುಟದಲ್ಲಿ ಉಳಿಸಿಕೊಳ್ಳಲೇ ಬೇಕು ಎಂದು ಹೈಕಮಾಂಡ್ ತಾಕೀತು ಮಾಡಿದೆ. ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೆ ಇದನ್ನು ಹೇಳಿ ಅಸಮಾಧಾನ ಸರಿಪಡಿಸಿ ಎಂದು ಕರ್ನಾಟಕದ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ಲಕ್ಷ್ಮಣ ಸವದಿ ಅವರನ್ನು ಏಕಾಏಕಿ ಸಚಿವರನ್ನಾಗಿ ಮಾಡಿದ್ದಲ್ಲದೇ ಉಪಮುಖ್ಯಮಂತ್ರಿ ಹುದ್ದೆಯನ್ನೂ ನೀಡಲಾಗಿದೆ. ಇದು ನಮಗೆ ಆಘಾತ ತಂದಿದೆ. ಶಾಸಕರಾಗಿ ಆಯ್ಕೆಯಾಗದಿರುವವರನ್ನು ಮಂತ್ರಿಯನ್ನಾಗಿ ಮಾಡಿದ್ದರ ಹಿಂದೆ ಬೇರೆ ಏನೋ ಕಾರಣ ಇರಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗುತ್ತಿದೆ .