ಕನ್ನಡ ಕಿರುತೆರೆಯಲ್ಲಿ ಸುಮಾರು 6 ವರ್ಷಗಳಿಗಿಂತಲೂ ಹಿಂದಿನಿಂದ ಪ್ರಸಾರವಾಗುತ್ತಿರುವ ಧಾರಾವಾಹಿ ಎಂದರೆ ಅದು ಲಕ್ಷ್ಮಿ ಬಾರಮ್ಮ. ಇನ್ನು ಇಷ್ಟು ವರ್ಷಗಳೇ ಕಳೆದರೂ ಸಹ ಲಕ್ಷ್ಮಿ ಬಾರಮ್ಮ ಧಾರಾವಾಹಿ ಮಾತ್ರ ಕೊನೆಗೊಂಡೇ ಇಲ್ಲ. ಈ ವಿಷಯವಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಟ್ರೋಲ್ ಗಳನ್ನು ಮಾಡುತ್ತಿದ್ದರು.
ಇದೀಗ ಜನ ಕೇಳುತ್ತಿದ್ದ ಸಮಯ ಬಂದಿದ್ದು, ಲಕ್ಷ್ಮಿ ಬಾರಮ್ಮ ಧಾರಾವಾಹಿ ಮುಗಿಯುವ ಹಂತವನ್ನು ತಲುಪಿದೆ. ಹೌದು ಇಷ್ಟು ವರ್ಷಗಳ ಕಾಲ ಪ್ರಸಾರವಾದ ಲಕ್ಷ್ಮಿ ಬಾರಮ್ಮ ಧಾರಾವಾಹಿ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು , ಈ ಧಾರಾವಾಹಿ ಯಾವಾಗ ಮುಗಿಯುತ್ತದೆ ಎಂದು ಕೇಳುತ್ತಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ.