No menu items!
30.9 C
Munich
Thursday, June 18, 2026

ಲಕ್ಷ್ಮೀ ಹೆಬ್ಬಾಳಕರ್ ಶಿಫಾರಸ್ಸು: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ !

Must read

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯ ಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು, ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article