ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

Date:

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಬೆಂಗಳೂರು: ನಟ-ನಿರ್ದೇಶಕ Darling Krishna ಅವರ ಬಹು ನಿರೀಕ್ಷಿತ ಸಿನಿಮಾ ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆಯಾಗಿದೆ. ಇದೇ ಮಾರ್ಚ್ 19ರಂದು ಈ ಸಿನಿಮಾ ತೆರೆಗೆ ಬರಲಿದ್ದು, ಟ್ರೈಲರ್ ಬಿಡುಗಡೆಯಾಗಿದೆ. ವಿಶೇಷವೆಂದರೆ, ಈ ಟ್ರೈಲರ್ ಅನ್ನು ಡಾರ್ಲಿಂಗ್ ಕೃಷ್ಣ ಮತ್ತು Milana Nagaraj ದಂಪತಿಯ ಪುತ್ರಿ ಪರಿ ಬಿಡುಗಡೆ ಮಾಡಿದ್ದಾರೆ.
ಲವ್ ಮಾಕ್ಟೇಲ್ ಮೊದಲ ಭಾಗದ ಟ್ರೈಲರ್ ಅನ್ನು Sudeepa ಬಿಡುಗಡೆ ಮಾಡಿದ್ದರು. ಎರಡನೇ ಭಾಗದ ಟ್ರೈಲರ್ ಅನ್ನು V. Ravichandran ಬಿಡುಗಡೆ ಮಾಡಿದ್ದರು. ಈಗ ಮೂರನೇ ಭಾಗದ ಟ್ರೈಲರ್ ಕುಟುಂಬ ಸದಸ್ಯೆಯಾದ ಪರಿ ಬಿಡುಗಡೆ ಮಾಡಿರುವುದು ವಿಶೇಷವಾಗಿದೆ.
ಟ್ರೈಲರ್ ಬಿಡುಗಡೆ ಹಿನ್ನೆಲೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ Shashank ಹಾಗೂ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಸುಪ್ರೀತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಸೇರಿದಂತೆ ದಿಲೀಪ್ ರಾಜ್, ಶ್ವೇತಾ ಪ್ರಸಾದ್, ಅಮೃತಾ ಅಯ್ಯಂಗಾರ್, ರಾಘವೇಂದ್ರ ಕಾಮತ್, ಜಗದೀಶ್, ರೆಚೆಲ್ ಡೇವಿಡ್, ಶ್ರೀ ಕ್ರೇಜಿ ಮೈಂಡ್ಸ್, ಸಂವೃತ, ಅಭಿಲಾಶ್, ರಜನಿ ಮತ್ತು ನಯಾರಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾರ್ಲಿಂಗ್ ಕೃಷ್ಣ, “ಒಂದು ಕ್ಷಣದಲ್ಲಿ ಈ ಸಿನಿಮಾದ ಕಥೆಯ ಆಲೋಚನೆ ಮೂಡಿತು. ಅದನ್ನು ಬರೆಯಲು ಮನೆಯಲ್ಲಿ ಸಾಧ್ಯವಾಗಲಿಲ್ಲ. ಆದ್ದರಿಂದ ಮೂರು ದಿನಗಳ ಕಾಲ ಗೋವಾಕ್ಕೆ ತೆರಳಿ ಅಲ್ಲಿಯೇ ಕಥೆ ಹಾಗೂ ಚಿತ್ರಕಥೆಗೆ ರೂಪುರೇಷೆ ನೀಡಿದೆ,” ಎಂದು ಹೇಳಿದರು.
ಮಿಲನಾ ನಾಗರಾಜ್ ಮಾತನಾಡುತ್ತಾ, ಸಿನಿಮಾ ಬಹಳ ಚೆನ್ನಾಗಿ ಮೂಡಿ ಬಂದಿರುವುದರಿಂದ ಆತ್ಮವಿಶ್ವಾಸ ಇದೆ. ಹಿಂದಿನ ಎರಡು ಭಾಗಗಳಿಗೆ ನೀಡಿದಂತೆ ಪ್ರೇಕ್ಷಕರು ಈ ಸಿನಿಮಾಗಿಗೂ ಪ್ರೀತಿ ಮತ್ತು ಪ್ರೋತ್ಸಾಹ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.
ಕ್ರಿಸ್‌ಮಿ ಬ್ಯಾನರ್ ಅಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ರೆಚೆಲ್ ಡೇವಿಡ್, ನಯೇರಾ, ಜಗದೀಶ್, ಅಭಿಲಾಶ್, ಗಿರಿರಾಜ್ ಮತ್ತು ದಳಪತಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲನ ಮಾಡಿದ್ದು, ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಅಮರ್ ಮತ್ತು ಜೋನಾ ಕಲಾ ನಿರ್ದೇಶನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...