ಕರ್ನಾಟಕದಲ್ಲಿ ನೋ ವ್ಯಾಕ್ಸಿನ್, ನೋ ರೇಷನ್ ಎಂಬ ಹೆಸರಿನಲ್ಲಿ ಹರಿದಾಡುತ್ತಿರುವ ಸುದ್ದಿಗಳು ಗೊಂದಲ ಮೂಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ. ಗುರುವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆ ಮೂಲಕ ನೋ ವ್ಯಾಕ್ಸಿನ್, ನೋ ರೇಷನ್ ಹೆಸರಿನಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರದ ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಜೋಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಒಂದು ಪಕ್ಷ ಈ ರೀತಿಯಾಗಿ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗೆ ತಪ್ಪಾಗಿ ಜೋಡಿಸಿದ್ದಲ್ಲಿ ಅದನ್ನು ಕೂಡಲೇ ಕೈಬಿಡಬೇಕು ಎಂದು ನಿರ್ದೇಶಿಸಿದೆ ಎಂದು ರವಿ ಕುಮಾರ್ ಹೇಳಿದ್ದಾರೆ.

ಇಂದಿನ ದಿನ ಪತ್ರಿಕೆಗಳಲ್ಲಿ ನೋ ವ್ಯಾಕ್ಸಿನ್, ನೋ ರೇಷನ್ ಎಂಬ ಶೀರ್ಷಿಕೆಯಡಿ ಕೋವಿಡ್ ಲಸಿಕೆ ಪಡೆಯದವರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂದು ವರದಿಯಾಗಿರುವುದು ತಿಳಿದುಬಂದಿರುತ್ತದೆ.






