No menu items!
7.9 C
Munich
Wednesday, April 15, 2026

ಲಾಂಗ್ ಹಿಡಿದು ರೀಲ್ಸ್: ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ, ರಜತ್ ವಿರುದ್ಧ FIR

Must read

ಲಾಂಗ್ ಹಿಡಿದು ರೀಲ್ಸ್: ಬಿಗ್ ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ, ರಜತ್ ವಿರುದ್ಧ FIR

ಇತ್ತೀಚೆಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ ಸಂಬಂಧ ಶಸ್ತ್ರಾಸ್ತ್ರ ಕಾಯ್ದೆ ಅಡಿ‌ ಬಸವೇಶ್ವರ ನಗರ ಠಾಣೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು, ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಸ್ತ್ರಾಸ್ತ್ರ ಕಾಯ್ದೆ ಅಡಿ‌ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ಹಾಕಲಾಗಿದೆ. ಸಾರ್ವಜನಿಕ ಸ್ಥಳದಲಿ, ಕಾನೂನು ಬಾಹಿರವಾಗಿ ಲಾಂಗ್ ಹಿಡಿದುಕೊಂಡು ರಿಲ್ಸ್ ಮಾಡಿದ್ದೇ ಇವರಿಗೆ ಸಮಸ್ಯೆ ತಂದಿದೆ. ರಜತ್ ಅವರು ಈ ವಿಡಿಯೋನ ಅಪ್ಲೋಡ್ ಮಾಡಿದ್ದರು.
ಈ ವಿಡಿಯೋ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಈ ಇಬ್ಬರ ಸ್ವರ್ಧಿಗಳ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -spot_img

More articles

- Advertisement -spot_img

Latest article