ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿ: ಇಬ್ಬರು ಸಾವು

0 Min Read

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು.
ಬುಲೆರೋ ವಾಹನ ಚಾಲಕನಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article