ಲಾಲ್‌ ಬಾಗ್ ಕೆರೆಯಲ್ಲಿ ಅಪರಿಚಿತ ಶವ ಪತ್ತೆ – ಪೊಲೀಸರು ಪರಿಶೀಲನೆ ಆರಂಭ

Date:

ಲಾಲ್‌ ಬಾಗ್ ಕೆರೆಯಲ್ಲಿ ಅಪರಿಚಿತ ಶವ ಪತ್ತೆ – ಪೊಲೀಸರು ಪರಿಶೀಲನೆ ಆರಂಭ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಾಲ್‌ ಬಾಗ್ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾದ ಘಟನೆ ಇಂದು ಬೆಳಿಗ್ಗೆ ಸಂಚಲನ ಮೂಡಿಸಿದೆ.

ಬೆಳಗ್ಗೆ ಸುಮಾರು 6:30ರ ಸಮಯದಲ್ಲಿ ಶವ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಮಹಿಳೆಯು ಸುಮಾರು 45 ವರ್ಷ ವಯಸ್ಸಿನವರಾಗಿರುವುದಾಗಿ ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸಿದ್ದಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಕೆರೆಯಿಂದ ಹೊರತೆಗೆಯಲಾಗಿದ್ದು, ಮುಂದಿನ ತನಿಖೆಗಾಗಿ ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಹಿಳೆಯ ಗುರುತು ಹಾಗೂ ಸಾವಿನ ಕಾರಣ ಪತ್ತೆಗೆ ತೀವ್ರ ತನಿಖೆ ಕೈಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...