ಲಿಗರ್ ಕುರಿತು ಸಿಟ್ಟಾದ ವಿಜಯ್ ದೇವರಕೊಂಡ

Date:

ತೆಲುಗಿನ ಸೆನ್ಸೇಷನ್ ಸ್ಟಾರ್ ವಿಜಯ್ ದೇವರಕೊಂಡ ಬಗ್ಗೆ ವಂದತಿಗಳು ಹರಿದಾಡುತ್ತಿರುವುದು ಹೊಸದೇನಲ್ಲ. ಡೇಟಿಂಗ್, ಸಿನಿಮಾ ವಿಚಾರವಾಗಿ ವಿಜಯ್ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಇದೀಗ ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷೆಯ ಹೊಸ ಸಿನಿಮಾ ಲೈಗರ್ ಬಗ್ಗೆ ವದಂತಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರ್ಜುನ್ ರೆಡ್ಡಿ ನಟ ಗರಂ ಆಗಿದ್ದಾರೆ. ನಿರ್ದೇಶಕ ಪುರಿ ಜಗನ್ನಾಥ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಲೈಗರ್ ಸಿನಿಮಾ ಈಗಾಗಲೇ ಭಾರಿ ಕುತೂಹಲ ಹುಟ್ಟುಹಾಕಿದೆ. ಹಿಂದಿ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗುತ್ತಿರುವ ಲೈಗರ್ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಬಂಡವಾಳ ಹೂಡಿಸಿದ್ದಾರೆ.

ಪೋಸ್ಟರ್ ಮೂಲಕ ಕುತೂಹಲ ಮೂಡಿಸಿರುವ ಲೈಗರ್ ಯಾವಾಗ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ. ಈ ನಡುವೆ ಲೈಗರ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಲೈಗರ್ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. 200 ಕೋಟಿ ರೂಪಾಯಿಗೆ ಡೀಲ್ ಆಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.

ಇದನ್ನು ನೋಡಿ ಸಿಟ್ಟಾದ ವಿಜಯ್ ದೇವರಕೊಂಡ ಸ್ಕ್ರೀನ್ ಶಾಟ್ ಶೇರ್ ಮಾಡಿ ಸುದ್ದಿಯನ್ನು ತಳ್ಳಿಹಾಕಿದ್ದಾರೆ. “ಇದು ತೀರಾ ಕಡಿಮೆಯಾಯಿತು. ನಾನು ಚಿತ್ರಮಂದಿರಗಳಲ್ಲಿ ಇನ್ನು ಹೆಚ್ಚು ಗಳಿಕೆ ಮಾಡುತ್ತೇನೆ,” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಲೈಗರ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಮೊದಲ ಬಾರಿಗೆ ಪುರಿ ಜಗನ್ನಾಥ್ ಜೊತೆ ಸಿನಿಮಾ ಮಾಡುತ್ತಿದ್ದು, ಚಿತ್ರದ ಬಗ್ಗೆ ವಿಜಯ್ ಕೂಜ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಬಾಲಿವುಡ್ ನಟಿ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದಾರೆ. ಅನನ್ಯಾ ಪಾಂಡೆ, ವಿಜಯ್‌ಗೆ ನಾಯಕಿಯಾಗುವ ಮೂಲಕ ಮೊದಲ ಬಾರಿಗೆ ದಕ್ಷಿಣ ಭಾರತದ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...