ಬೆಂಗಳೂರು: ಕಳೆದ ಒಂದು ತಿಂಗಳಿಂದಲೂ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಷಯ ಸದ್ದು ಮಾಡುತ್ತಲೇ ಇದೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರೋ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡು 31 ದಿನ ಕಳೆದಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ಅವರು ಭಾರತಕ್ಕೆ ಅಗಮಿಸಲು ಕೊನೆಗೂ ಟಿಕೆಟ್ ಬುಕ್ ಮಾಡಿದ್ದಾರೆ.
ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಮೇ 31ರ ಬೆಳಗ್ಗೆ 10:30ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಂತೆ ಮೇ 31ರಂದು ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಆದ್ರೆ, ಪ್ರಜ್ವಲ್ ರೇವಣ್ಣ ಆಗಮಿಸುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ಆ ಸಮಯದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ. ಬದಲಿಗೆ ಜೂನ್ 1ಕ್ಕೆ ವಿಚಾರಣೆಗೆ ಹಾಜರಾಗಹುದು
ಇನ್ನು ಪ್ರಜ್ವಲ್ ರೇವಣ್ಣ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ, ಹೀಗಾಗಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಪ್ರಜ್ವಲ್ ರೇವಣ್ಣ ಯಾವ ವಿಮಾನದಲ್ಲಿ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದೆ ಎಂದು ಇಂಚಿಚು ಮಾಹಿತಿಯನ್ನು ಕಲೆಹಾಕುತ್ತಿದೆ
ಲುಫ್ತಾನ್ಸಾ ಏರ್ ಲೈನ್ಸ್ ಟಿಕೆಟ್ ಬುಕ್ ಮಾಡಿರೋ ಪ್ರಜ್ವಲ್
Date:






