ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

Date:

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು:- ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಾಹಿತಿ ಬಾನು ಮುಷ್ತಾಕ್ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ. ಬಾನು ಮುಷ್ತಾಕ್‌ ಅವರ ಹಿಂದಿನ ಹೇಳಿಕೆಗೆ ನಮ್ಮ ವಿರೋಧ ಇತ್ತು. ಇಡೀ ರಾಜ್ಯದಲ್ಲಿ ಹಿಂದುತ್ವ ಪರಿಪಾಲಕರು ಯಾರೂ ಅವರ ಹೇಳಿಕೆ ಒಪ್ಪಲಿಲ್ಲ. ಇವತ್ತು ಅವರ ಭಾಷಣ ನೋಡಿ ನಮಗೆ ಸಂತೋಷ ಆಗಿದೆ ಎಂದರು.

ಮುಸ್ಲಿಂ ಹೆಣ್ಣು ಮಗಳು ಹಿಂದೂ ಹೆಣ್ಣುಮಗಳಂತೆ ಅರಿಶಿಣ ಬಣ್ಣದ ಸೀರೆಯುಟ್ಟು ಹೂ ಮುಡಿದು ದೇವಸ್ಥಾನಕ್ಕೆ ಬಂದು, ಆರತಿ ಬೆಳಗಿ, ಮಂಗಳಾರತಿ ತೆಗೆದುಕೊಂಡಿದ್ದಾರೆ. ಹಿಂದೂ ಸಂಸ್ಕೃತಿ ಪರವಾಗಿ ನಿಂತು ಅವರು ದಸರಾ ಉದ್ಘಾಟನೆ ಮಾಡಿದ್ದಾರೆ ಎಂದು ಹೇಳಿದರು. ನಮಗೆ ಏನು ಬೇಕಿತ್ತೋ? ನಮ್ಮ ನಿರೀಕ್ಷೆ ಏನು ಇತ್ತೋ ಅದನ್ನು ಅವರು ಇವತ್ತು ಮಾಡಿದ್ದಾರೆ. ಹಿಂದೂ ಸಂಸ್ಕೃತಿಗೆ ಗೌರವ ಕೊಟ್ಟು ಬಾನು ಮುಷ್ತಾಕ್ ಇವತ್ತು ನಡೆದುಕೊಂಡಿದ್ದಾರೆ. ಹೀಗಾಗಿ ಅವರ ಮೇಲೆ ನಮಗೆ ಗೌರವ ಹೆಚ್ಚಾಗಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...