ಲೇಖಕಿ ಬಾನು ಮುಷ್ತಾಕ್ ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ತಮ್ಮ ಹೃದಯದೀಪ ಕೃತಿ ಮೂಲಕ ಬಾನು ಮುಷ್ತಾಕ್ ಅವರು, ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತಸದ ವಿಷಯ ಎಂದು ಸಿಎಂ ತಿಳಿಸಿದ್ದಾರೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್.
ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದಸರಾ ನಡೆಯಲಿದ್ದು, ಈಗಾಗಲೇ ಮೈಸೂರಿನಲ್ಲಿ ದಸರಾ ಸಿದ್ಧತೆಗಳು ಬಿರುಸಿನಿಂದ ಸಾಗಿದೆ.