ರಾಜಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ. ಪೊಲೀರು ರಾಜಭವನ ಚಲೋ ತಡೆಯುತ್ತಿದ್ದಂತೆಯೇ ರೊಚ್ಚಿಗೆದ್ದ ಶಾಸಕಿ ಸೌಮ್ಯ ರೆಡ್ಡಿ ಲೇಡಿ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ ಎನ್ನಲಾಗಿದೆ.
ರಾಜಭವನದ ಬಳಿ ಬರುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಾಮಲಿಂಗಾರೆಡ್ದಿ, ಈಶ್ವರ ಖಂಡ್ರೆ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಸೌಮ್ಯ ರೆಡ್ಡಿ ಅವರು ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ್ದಾರೆನ್ನಲಾಗಿದ್ದು, ಈ ಆರೋಪ ಅಲ್ಲಗಳೆದ ಅವರು, ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಈ ವೇಳೆ ಶಾಸಕಿ ಸೌಮ್ಯರೆಡ್ಡಿ ಹಾಗೂ ಮಹಿಳಾ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇದೇ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಸೌಮ್ಯ ರೆಡ್ಡಿ ಬಲ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ನಂತರ ಶಾಸಕಿ ಸೌಮ್ಯರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆದರು,