No menu items!
26.2 C
Munich
Wednesday, July 29, 2026

ಲೈಂಗಿಕ ದೌರ್ಜನ್ಯ ಆರೋಪ: ಇಂದು ಸಿಐಡಿಗೆ ವಿಚಾರಣೆಗೆ ಹಾಜರಾಗಲಿರುವ ಬಿಎಸ್ ಯಡಿಯೂರಪ್ಪ

Must read

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಿಐಡಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು.
ಇದಾದ ಬಳಿಕ ಸಿಐಡಿ ಬಿಎಸ್‌ವೈ ಅವರನ್ನು ಕರೆದು ವಾಯ್ಸ್ ಸ್ಯಾಂಪಲ್ ಪಡೆದು ತನಿಖಾಧಿಕಾರಿಗಳು ಅವರನ್ನು ಕಳುಹಿಸಿಕೊಟ್ಟಿದ್ದಾರೆ. ಹೆಚ್ಚಿನ ವಿಚಾರಣೆಗೆ ಬಿಎಸ್‌ವೈಗೆ ಸಿಐಡಿ ನೋಟಿಸ್ ನೀಡಿತ್ತು. ಬಿಎಸ್‌ವೈ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರಿಂದ ಸಿಐಡಿ ವಾರೆಂಟ್ ಜಾರಿ ಮಾಡಿ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಕೋರ್ಟ್ ಬಂಧಿಸದಂತೆ ತಡೆ ನೀಡಿ ಇಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದರಿಂದ ಇಂದು ಸಿಐಡಿ ಮುಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತನಿಖೆಗೆ ಹಾಜರಾಗಲಿದ್ದಾರೆ.

- Advertisement -spot_img

More articles

- Advertisement -spot_img

Latest article