ಲೈಂಗಿಕ ದೌರ್ಜನ್ಯ ಕೇಸ್: ವಕೀಲ ದೇವರಾಜೆಗೌಡ ಅರೆಸ್ಟ್….!

Date:

ಬೆಂಗಳೂರು:- ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ವಕೀಲ ದೇವರಾಜೆಗೌಡನನ್ನು ಹಿರಿಯೂರಿನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ವಿಚಾರದಲ್ಲಿ ವಕೀಲ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಕೇಸ್​ನ ವಿಚಾರಗಳು ಬಹಿರಂಗವಾಗಿವೆ. ಏಪ್ರಿಲ್ 1 ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯಿಂದ‌ ದೂರು ನೀಡಲಾಗಿತ್ತು

ಸೈಟ್ ಮಾರಾಟ ಮಾಡಿಸಿಕೊಡುವ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ. ಹೀಗಾಗಿ ಮಹಿಳೆ‌ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐಆರ್​ ದಾಖಲಾಗಿದೆ.

ಮಹಿಳೆ ಮೇಲಿನ ದೌರ್ಜನ್ಯ ಆರೋಪ ಕೇಸ್​ನಲ್ಲಿ ಜಾಮೀನಿಗಾಗಿ ದೇವರಾಜೇಗೌಡ ಮೇ 8ರಂದು ಹಾಸನದ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮೇ 15 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...