ಚೆನ್ನೈ: ಲೋಕಸಭಾ ಚುನಾವಣಾ ಪ್ರಚಾರದಿಂದ ನಟಿ ಖುಷ್ಬು ಸುಂದರ್ ಹಿಂದೆ ಸರಿದಿದ್ದಾರೆ. ಹೌದು ತಮಿಳುನಾಡಿನಲ್ಲಿ ಬಿಜೆಪಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿರುವ ನಟಿ ಖುಷ್ಬು ಸುಂದರ್ ಪ್ರಚಾರದಿಂದ ಹಿಂದೆ ಸರಿದಿದ್ದು, ಈ ಸಂಬಂಧ ಖುಷ್ಬು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಮೇಲೆ ಗಮನಹರಿಸಬೇಕು. ಹೀಗಾಗಿ ನಾನು ಇಂದು ಅಂತಹ ಸಂದಿಗ್ಧದಲ್ಲಿದ್ದೇ ನೆ ಎಂದಿದ್ದಾರೆ.
2019 ರಲ್ಲಿ ದೆಹಲಿಯಲ್ಲಿ ಸಂಭವಿಸಿದ ಅಪಘಾತದಿಂದ ಮೂಳೆ ಮುರಿದಿದೆ. ಕಳೆದ 5 ವರ್ಷಗಳಿಂದ ಆರೋಗ್ಯದ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಆದರೂ ಸಮಸ್ಯೆ ನನ್ನನ್ನು ಕಾಡುತ್ತಿದೆ. ಹೀಗಾಗಿ ವೈದ್ಯರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದಂತೆ ಸೂಚಿಸಿದ್ದಾರೆ ಎಂದು ಪತ್ರದಲ್ಲಿ ನಟಿ ತಿಳಿಸಿದ್ದಾರೆ. ಪ್ರಚಾರದ ಸಂದರ್ಭದಲ್ಲಿ ಹೆಚ್ಚು ಪ್ರಯಾಣ, ಕುಳಿತುಕೊಳ್ಳುವುದು ಅತ್ಯಗತ್ಯ. ಹೀಗಾಗಿ ಮತ್ತೆ ನನಗೆ ಸಮಸ್ಯೆ ಕಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಅಲ್ಪ ವಿರಾಮ ಘೋಷಿಸಿದ್ದೇನೆ ಎಂದು ಖುಷ್ಬು ಪತ್ರದಲ್ಲಿ ವಿವರಿಸಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಖುಷ್ಬು..!
Date:






