ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು !

Date:

ತುಮಕೂರು: ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎನ್ನುವ ಕುರಿತಾಗಿ ಭಾರೀ ಚರ್ಚೆಗಳು ನಡೆದಿವೆ. ಅಂತಿಮವಾಗಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ನಮ್ಮ ಪಕ್ಷ ರಾಷ್ಟ್ರೀಯ ನಾಯಕರಿಗೆ ಕೊಡುವ ಗೌರವವನ್ನು ಬೂತ್ ಕಾರ್ಯಕರ್ತನಿಗೂ ಕೊಡುತ್ತದೆ. ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದಿದ್ದಾರೆ.


ಇಡೀ ಜಗತ್ತೇ ನರೇಂದ್ರ ಮೋದಿ ಅವರನ್ನು ಮೆಚ್ಚಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಎಲ್ಲಾ ಹಿರಿಯರ ವಿಶ್ವಾಸದೊಂದಿಗೆ ಪಕ್ಷ ಮುನ್ನಡೆಸಬೇಕು. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡ ಬೇಕಿದೆ. ಅತ್ಯಲ್ಪ ಕಾಲದಲ್ಲೇ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದಾಗಿದೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...