ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಚುನಾವಣಾ ಪ್ರಚಾರ ನಡೆಸಿದ ವೇಳೆ ಮಾತನಾಡಿದ ಅವರು, ನನ್ನ ಸ್ಪರ್ಧೆಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಹೆಚ್ಡಿ ಕುಮಾರಸ್ವಾಮಿ ಸಮ್ಮತಿಸಿದ್ದಾರೆ.
ಒಬ್ಬ ಸಂಸದ ಏನು ಮಾಡಬಹುದೆಂದು ತೋರಿಸುತ್ತೇನೆ. ಕೆ. ಸುಧಾಕರ್ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಸುಧಾಕರ್. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಮ್ಮ ಪಾತ್ರವೂ ಇದೆ. ಎಂಟಿಬಿ ನಾಗರಾಜ್, ನಾನು ರಿಸ್ಕ್ ತೆಗೆದುಕೊಂಡು ಬಿಜೆಪಿ ಸೇರಿದ್ದೆವು. ಆದರೆ, ನಮ್ಮ ತ್ಯಾಗಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಅನ್ಯಾಯವಾಗಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವರಿಷ್ಠರು ಸಮ್ಮತಿಸಿದ್ದಾರೆ !
Date: