ಲೋಕಸಭಾ ಚುನಾವಣೆ: ನಾಮಪತ್ರ ಹಿಂಪಡೆದ ದಿಂಗಾಲೇಶ್ವರ ಸ್ವಾಮೀಜಿ

Date:

ಧಾರವಾಡ: ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಹೇಳಿದ್ದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಇದೀಗ ಲೋಕ ಸಮರದ ಕಣದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ವಿರುದ್ಧ ತೊಡೆ ತಟ್ಟಿ ಅನೇಕ ಕಡೆಗಳಲ್ಲಿ ಭಕ್ತರ ಸಭೆ ನಡೆಸಿದ್ದ ದಿಂಗಾಲೇಶ್ವರ ಸ್ವಾಮೀಜಿ, ಧಾರವಾಡದ ಟೌನ್ ಹಾಲ್‌ನಿಂದ ಮೆರವಣಿಗೆ ಮೂಲಕ ಬಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.
ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಇದು ಧರ್ಮ ಯುದ್ಧ ಎಂದು ಹೇಳಿದ್ದ ಸ್ವಾಮೀಜಿ, ಸೋಮವಾರ ತಮ್ಮ ಸೂಚಕರಾಗಿದ್ದ ಸಚಿನ್ ಪಾಟೀಲ ಹಾಗೂ ಅಮೃತ ಬಳ್ಳೊಳ್ಳಿ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ಅವರ ಮೂಲಕ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.
ಇದರಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಪ್ರಭಾವಿಗಳ ಮಧ್ಯೆಯೇ ಇದೀಗ ಸ್ಪರ್ಧೆ ಏರ್ಪಟ್ಟಂತಾಗಿದೆ. ದಿಂಗಾಲೇಶ್ವರ ಶ್ರೀಗಳು ತಮ್ಮ ನಾಮಪತ್ರ ವಾಪಸ್ ಪಡೆಯಲು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬಂದರೂ ಸ್ವತಃ ತಾವೇ ಬಂದು ನಾಮಪತ್ರ ವಾಪಸ್ ಪಡೆಯದೇ ಸೂಚರನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿ ಅವರ ಮೂಲಕ ತಮ್ಮ ಉಮೇದುವಾರಿಕೆ ವಾಪಸ್ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...