No menu items!
14.6 C
Munich
Tuesday, May 5, 2026

ಲೋಕಸಭೆಯಲ್ಲಿ ನಮಗೆ ಆಶೀರ್ವಾದ ಮಾಡುವ ಕೆಲಸ ನೀವು ಮಾಡಬೇಕು !

Must read

ಬೆಂಗಳೂರು: ನಟ ಶಿವರಾಜ್ ಕುಮಾರ್’ಗೆ ಲೋಕಸಭೆಗೆ ನಿಲ್ಲಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಫರ್ ಕೊಟ್ಟಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ಈಡಿಗರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆಶಿಯವರು ನಟ ಶಿವಣ್ಣಗೆ ಈ ಆಫರ್ ನೀಡಿದ್ದಾರೆ. ಪಾರ್ಲಿಮೆಂಟಿಗೆ ರೆಡಿ ಆಗಿ ಅಂತ ನಾನು ಈಗಾಗಲೇ ಶಿವಣ್ಣಗೆ ಹೇಳಿದ್ದೇನೆ. ಆಗ ಅವರು,
ಇಲ್ಲ ಒಂದು 5 ಚಿತ್ರ ಒಪ್ಪಿಕೊಂಡಿದ್ದೇನೆ ಅಂದ್ರು. ಚಿತ್ರ ಯಾವಾಗಾದ್ರೂ ಮಾಡಬಹುದು. ಆದರೆ ಪಾರ್ಲಿಮೆಂಟ್’ಗೆ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ ಅಂತಾ ಹೇಳಿದ್ದೇನೆ ಎಂದು ಡಿಕೆಶಿ ತಿಳಿಸಿದರು. ಲೋಕಸಭೆಯಲ್ಲಿ ನಮಗೆ ಆಶೀರ್ವಾದ ಮಾಡುವ ಕೆಲಸ ನೀವು ಮಾಡಬೇಕು. ಮಂಗಳೂರು, ಉಡುಪಿ, ಉತ್ತರ ಕರ್ನಾಟಕ ಎಲ್ಲೆ ಇರ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸುವ ಕೆಲಸ ಮಾಡಿ ಎಂದರು.

- Advertisement -spot_img

More articles

- Advertisement -spot_img

Latest article