ಲೋಕ ಸಮರಕ್ಕೆ ಮುಹೂರ್ತ ಫಿಕ್ಸ್: 7 ಹಂತಗಳಲ್ಲಿ ಮತದಾನ

Date:

ದೆಹಲಿ: 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ದಿನಾಂಕಗಳನ್ನು ಪ್ರಕಟಿಸಿದ ಸಮಯದಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಎಂಬ ನಾಲ್ಕು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಚುನಾವಣಾ ಆಯೋಗ ಪ್ರಕಟಿಸಿದೆ.
ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೊದಲು ಚುನಾವಣಾ ಸಿದ್ಧತೆಯ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮಾತುಗಳನ್ನು ಆರಂಭಿಸಿದ ಕುಮಾರ್, ಚುನಾವಣೆಗಳು ಒಂದು ರೀತಿಯ ಹಬ್ಬವಾಗಿರುವ ಭಾರತದತ್ತ ಎಲ್ಲರ ಕಣ್ಣು ನೆಟ್ಟಿದೆ. ನಿಜವಾದ ಹಬ್ಬದ ಪ್ರಜಾಸತ್ತಾತ್ಮಕ ವಾತಾವರಣದಲ್ಲಿ ಚುನಾವಣೆ ನಡೆಸುವುದಾಗಿ ನಾವು ಭರವಸೆ ನೀಡುತ್ತೇವೆ. ಪ್ರತಿ ಚುನಾವಣೆಯು ಹೊಸ ಪರೀಕ್ಷೆಯಾಗಿದೆ, ಇಡೀ ಕಾರ್ಯವ್ಯವಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲಾಗಿದೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...