ಬೆಂಗಳೂರು: ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಈ ಪ್ರಕರಣ ತನಿಖೆಯನ್ನು ಸಿಸಿಬಿ ವರ್ಗಾಯಿಸಿದ್ದಾರೆ. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಚೈತ್ರಾ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಅಲ್ಲದೇ ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ಫೂಟೇಜ್ ಪರಿಶೀಲನೆಗೆ ನಡೆಸುತ್ತಿದ್ದಾರೆ. ಸಧ್ಯ ಚೈತ್ರಾ ಮರಣೋತ್ತರ ಪರೀಕ್ಷೆಯ ವರದಿಗಾಗಿ ಸಿಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ.
ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ: ತನಿಖೆ ಸಿಸಿಬಿಗೆ ವರ್ಗಾವಣೆ
Date:






