ಬೆಂಗಳೂರು:- ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ.
ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.
ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ. ದೂರು ಆಧರಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.